ನವದೆಹಲಿ | ದೆಹಲಿಯ ಏಮ್ಸ್‌ಗೆ ದಾಖಲಾಗಿರುವ ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ಆರೋಗ್ಯವಾಗಿದ್ದಾರೆ ಎಂದು ಎಐಐಎಂಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
96 ವರ್ಷದ ಅಡ್ವಾಣಿ ಅವರು ವಯೋಸಹಜ ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಸ್ಥಿತಿ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಏಮ್ಸ್ ಸ್ಪಷ್ಟಪಡಿಸಿದೆ. ಕಳೆದ ದಿನ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ಪ್ರಸ್ತುತ ಜೆರಿಯಾಟ್ರಿಕ್ ವಾರ್ಡ್‌ನಲ್ಲಿ ನಿಗಾದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಅಡ್ವಾಣಿ ಅವರ ಕುಟುಂಬ ಸದಸ್ಯರಿಗೆ ಕರೆ ಮಾಡಿ ಪ್ರಧಾನಿ ಮಾಹಿತಿ ಕೇಳಿದರು. ಪರಿಣಿತ ಚಿಕಿತ್ಸೆಗಾಗಿ ಏಮ್ಸ್ ಎಲ್ಲಾ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಕುಟುಂಬ ಸದಸ್ಯರಿಗೆ ಮೋದಿ ತಿಳಿಸಿದರು. ದೇಶವು ಈ ವರ್ಷ ಎಲ್ ಕೆ ಅಡ್ವಾನಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಿತ್ತು..
To post your articles and news,please signup. This facility will be available soon. Please wait...
© www.idondusuddi.site. All Rights Reserved. Design by myweb