ಕರ್ನಾಟಕ ಸ್ಕೂಲ್ ಎಕ್ಝಾಮಿನೇಶನ್ ಮತ್ತು ಎಸ್ಸೆಸ್ಸೆಸ್'ಮೆಂಟ್ ಬೋರ್ಡ್ ಇಂದು 10:30 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದೆ. ವಿಧ್ಯಾರ್ಥಿಗಳಿಗೆ karresults.nic.in ಅಥವಾ kseab.Karnataka.gov.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದೆ..
ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ. ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ. ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.
To post your articles and news,please signup. This facility will be available soon. Please wait...
© www.idondusuddi.site. All Rights Reserved. Design by myweb